Asianet Suvarna News Asianet Suvarna News

ಪ್ರಾಣಪ್ರತಿಷ್ಠೆ ಬಳಿಕ ಮೊದಲ ಬಾರಿಗೆ ಆಯೋಧ್ಯೆ ರಾಮ ಲಲ್ಲಾ ದರ್ಶನ ಪಡೆದ ಮೋದಿ!

ಆಯೋಧ್ಯ ರಾಮ ಮಂದಿರ ಪ್ರಾಣಪ್ರತಿಷ್ಠೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ರಾಮಲಲ್ಲಾ ದರ್ಶನ ಪಡೆದಿದ್ದಾರೆ. ಆಯೋಧ್ಯೆಯಿಂದಲೇ ತಮ್ಮ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸುತ್ತಿರುವ ಮೋದಿಗೆ, ಅದ್ಧೂರಿ ಸ್ವಾಗತ ನೀಡಲಾಗಿದೆ. 

PM Modi Offers prayers at Ayodhya Ram mandir ahead of Roadshow for Lok sabha Election ckm
Author
First Published May 5, 2024, 7:58 PM IST

ಆಯೋಧ್ಯೆ(ಮೇ.05) ಆಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ರಾಮನ ದರ್ಶನ ಪಡೆದಿದ್ದಾರೆ. ವಾರಣಾಸಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೋದಿ, ನಾಮಪತ್ರ ಸಲ್ಲಿಕೆಗೂ ಮೊದಲು ಆಯೋಧ್ಯೆ ರಾಮ ಮಂದಿರಕ್ಕೆ ತೆರಳಿ ರಾಮಲಲ್ಲಾ ದರ್ಶನ ಪಡೆದಿದ್ದಾರೆ. ರಾಮಲಲ್ಲಾಗೆ ವಿಶೇಷ ಆರತಿ ಬೆಳಗಿ ಪೂಜೆ ಸಲ್ಲಿಸಿದ್ದಾರೆ. ರಾಮಲಲ್ಲಾ ದರ್ಶನದ ಬಳಿಕ ಮೋದಿ ರೋಡ್ ಶೋ ನಡೆಸಲಿದ್ದಾರೆ.

ಜನವರಿ 22ರಂದು ಆಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆಯಾಗಿತ್ತು. ರಾಮ ಲಲ್ಲಾನ ಪ್ರಾಣಪ್ರತಿಷ್ಠೆಯನ್ನು ಪ್ರಧಾನಿ ಮೋದಿ ನೇರವೇರಿಸಿದ್ದರು. ಕಠಿಣ ವೃತ ಕೈಗೊಂಡು ಪ್ರಾಣಪ್ರತಿಷ್ಠೆ ನೆರವೇರಿಸಿದ್ದ ಪ್ರಧಾನಿ ಮೋದಿಗೆ ದೇಶ ವಿದೇಶಗಳಿಂದ ಅಭಿನಂದನೆಗಳು ವ್ಯಕ್ತವಾಗಿತ್ತು. ಇದಾದ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ರಾಮ ಮಂದಿರ ಮುಕ್ತವಾಗಿತ್ತು. ಪ್ರಾಣಪ್ರತಿಷ್ಠೆ ಬಳಿಕ ಇದೇ ಮೊದಲ ಬಾರಿಗೆ ಆಯೋಧ್ಯೆ ಭೇಟಿ ನೀಡಿದ ಮೋದಿ, ರಾಮ ಮಂದಿರ ತೆರಳಿ ಸಾಷ್ಟಾಂಗ ನಮಸ್ಕಾರ ಹಾಕಿ ಪೂಡೆ ಸಲ್ಲಿಸಿದ್ದಾರೆ.

PM Modi Letter: ಬಡವರ ಮೀಸಲಾತಿಯನ್ನು ಮುಸ್ಲಿಮರಿಗೆ ನೀಡೋ ಕಾಂಗ್ರೆಸ್‌ ಅಜೆಂಡಾ ಬಗ್ಗೆ ಎಲ್ಲರಿಗೂ ತಿಳಿಸಿ..

ಮೋದಿ ವಾರಣಾಸಿ ಕ್ಷೇತ್ರದಿಂದ ನಾಮ ಪತ್ರ ಸಲ್ಲಿಕೆಗೆ ಆಯೋಧ್ಯೆಯಿಂದಲೇ ಪ್ರಚಾರ ಆರಂಭಿಸಿದ್ದಾರೆ. ಆಯೋಧ್ಯಯಲ್ಲಿ ರೋಡ್ ಶೋ ಆರಂಭಕ್ಕೂ ಮೊದಲು ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ.  

ಎರಡು ದಿನಗಳ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಮಮಂದಿರಕ್ಕೆ ಬೇಟಿ ನೀಡಿ ದರ್ಶನ ಪಡೆದಿದ್ದರು. ರಾಮಮಂದಿರ ಪ್ರಾಣಪ್ರತಿಷ್ಠಾಪನೆಯಾದ ಬಳಿಕ ಮೊಟ್ಟಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬಾಲ ರಾಮನ ದರ್ಶನ ಪಡೆದಿದ್ದರು. ಮೊದಲಿಗೆ ಹನುಮಾನ್‌ಗಢಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಾಷ್ಟ್ರಪತಿ ಬಳಿಕ ರಾಮಮಂದಿರ ಪ್ರವೇಶಿಸಿ ಗರ್ಭಗುಡಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಬಳಿಕ ಬಾಲಕರಾಮನಿಗೆ ಆರತಿ ಎತ್ತಿ ಪೂಜೆ ಸಲ್ಲಿಸಿದರು. ನಂತರದಲ್ಲಿ ಪವಿತ್ರ ಸರಯೂ ನದಿಯಲ್ಲಿ ನಡೆಯುವ ಆರತಿ ಪೂಜೆಯಲ್ಲಿ ಪಾಲ್ಗೊಂಡರು.

ಆದಿವಾಸಿ ಸಮುದಾಯಕ್ಕೆ ಸೇರಿದ ಕಾರಣ ರಾಷ್ಟ್ರಪತಿಯನ್ನು ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನ ನೀಡಿಲ್ಲ ಅನ್ನೋ ವಿಪಕ್ಷಗಳ ಟೀಕೆ ಇದೀಗ ಬಿಜೆಪಿ ಈ ಭೇಟಿ ಮೂಲಕ ಉತ್ತರ  ನೀಡುತ್ತಿದೆ. 

ರಾಜ್ಯದಲ್ಲಿ ವಸೂಲಿ ಗ್ಯಾಂಗ್‌ ನಡೆಸ್ತಿರುವ ಕಾಂಗ್ರೆಸ್‌: ಪ್ರಧಾನಿ ಮೋದಿರಾಜ್ಯದಲ್ಲಿ ವಸೂಲಿ ಗ್ಯಾಂಗ್‌ ನಡೆಸ್ತಿರುವ ಕಾಂಗ್ರೆಸ್‌: ಪ್ರಧಾನಿ ಮೋದಿ

 

Follow Us:
Download App:
  • android
  • ios