Asianet Suvarna News Asianet Suvarna News

ಸುಳ್ಳು ಹೇಳುವುದೇ ಬಿಜೆಪಿಯವರ ಸಾಧನೆ: ಶಾಸಕ ಲಕ್ಷ್ಮಣ ಸವದಿ ಲೇವಡಿ

ಕಳೆದ 10 ವರ್ಷಗಳಲ್ಲಿ ಯಾವುದೇ ಪ್ರಮುಖ ಯೋಜನೆಗಳನ್ನು ಅನುಷ್ಠಾನಗೊಳಿಸದೇ ಅವರು ಕೇವಲ ಸುಳ್ಳು ಹೇಳುತ್ತ ಬಂದಿದ್ದಾರೆ. ಸುಳ್ಳು ಹೇಳುವುದೇ ಬಿಜೆಪಿಯವರ ಸಾಧನೆಯಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಲೇವಡಿ ಮಾಡಿದರು.
 

Lying is BJPs achievement Says MLA Laxman Savadi gvd
Author
First Published May 17, 2024, 11:45 PM IST

ಅಥಣಿ (ಮೇ.17): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕನಸಿನ ಯೋಜನೆಯಾದ ನದಿಗಳ ಜೋಡಣೆ ಮಾಡುವ ಮೂಲಕ ನೀರಾವರಿ ಸೌಲಭ್ಯ ಒದಗಿಸಿ ಭಾರತ ಮಾತೆಗೆ ಹಸಿರು ಸೀರೆ ಉಡಿಸುವುದಾಗಿ ಹೇಳಿದ್ದರು ನರೇಂದ್ರ ಮೋದಿ. ಆದರೆ, ಕಳೆದ 10 ವರ್ಷಗಳಲ್ಲಿ ಯಾವುದೇ ಪ್ರಮುಖ ಯೋಜನೆಗಳನ್ನು ಅನುಷ್ಠಾನಗೊಳಿಸದೇ ಅವರು ಕೇವಲ ಸುಳ್ಳು ಹೇಳುತ್ತ ಬಂದಿದ್ದಾರೆ. ಸುಳ್ಳು ಹೇಳುವುದೇ ಬಿಜೆಪಿಯವರ ಸಾಧನೆಯಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಲೇವಡಿ ಮಾಡಿದರು. ಪಟ್ಟಣದ ಹೊರವಲಯದ ಸ್ಪೋರ್ಟ್ಸ್ ಕ್ಲಬ್ ಆವರಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದರು.

ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾದ ನಂತರ ದೇಶದ ಜನರು ಬಹಳಷ್ಟು ನಿರೀಕ್ಷೆಗಳನ್ನು ಹೊಂದಿದ್ದರು. ಅವರೇ ಹೇಳಿದಂತೆ ಗಂಗಾ ನದಿಯನ್ನು ಕಾವೇರಿ ನದಿಗೆ ಜೋಡಿಸುವುದು, ಕಾವೇರಿ ನದಿಯನ್ನು ಕೃಷ್ಣಾ ನದಿಗೆ ಜೋಡಿಸುವುದು, ದೇಶದ ಪ್ರಮುಖ ನದಿಗಳನ್ನು ಜೋಡಣೆ ಮಾಡುವ ಮೂಲಕ ದೇಶದಲ್ಲಿ ನೀರಾವರಿ ಕ್ರಾಂತಿ ಮಾಡಿ ರೈತರ ಆದಾಯ ದ್ವಿಗುಣಗೊಳಿಸಲಾಗುವುದು ಎಂದು ಹೇಳಿದ್ದರು. ಇದಲ್ಲದೆ ಎಲ್ಲೆಡೆ ಬುಲೆಟ್ ಟ್ರೈನ್ ಬಿಡುವುದು, ಸ್ವಿಸ್ ಬ್ಯಾಂಕ್‌ನಲ್ಲಿದ್ದ ಕಪ್ಪು ಹಣ ತಂದು ಅಭಿವೃದ್ಧಿ ಮಾಡುವುದು ಸೇರಿದಂತೆ ಅನೇಕ ಭರವಸೆಗಳನ್ನು ಪ್ರಣಾಳಿಕೆಗಳಲ್ಲಿ ನೀಡಿದ್ದರು. ಆದರೆ, ಅವುಗಳನ್ನು ಅನುಷ್ಠಾನಗೊಳಿಸುವಲ್ಲಿ ಬಿಜೆಪಿ ನಾಯಕರು ವಿಫಲವಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿ: ಬೊಮ್ಮಾಯಿ

ನನ್ನ ರಾಜಕೀಯ ಜೀವನದಲ್ಲಿ ಕಳೆದ 25 ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿದ ಅನುಭವ ನನಗಿದೆ. ಚುನಾವಣೆಗಳನ್ನು ಗೆಲ್ಲಬೇಕಾದರೇ ಕಾರ್ಯಾಗಾರಗಳನ್ನು ನಡೆಸುವ ಮೂಲಕ ಒಣಗಾಳಿಗೆ ಬೀಸುವ ಕೆಲವು ತಂತ್ರಗಾರಿಕೆ ರೂಪಿಸುತ್ತಾರೆ. ಅದಕ್ಕಾಗಿಯೇ ಮೋದಿ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಚಾಲಕ ತಜ್ಞರ ಮೂಲಕ ಮತದಾರರಲ್ಲಿ ಮನ ಪರಿವರ್ತನೆ ಮಾಡುತ್ತಾರೆ ಎಂದು ದೂರಿದರು. ಕಾಂಗ್ರೆಸ್ ಪಕ್ಷ ಆಡಳಿತ ಮಾಡುವುದರಲ್ಲಿ ಉತ್ತಮವಾಗಿದೆ. ಆದರೆ, ಬಿಜೆಪಿಯವರಂತೆ ಒಣಗಾಳಿ ಎಬ್ಬಿಸುವಲ್ಲಿ ದಡ್ಡತನ ಹೊಂದಿದ್ದಾರೆ. 

ಚೌಕ್‌ ಗಾಲಿಯನ್ನು ಉಳಿಸುವುದರಲ್ಲಿ ಹಿಂದೆ ಇದ್ದಾರೆ. 2016ರಲ್ಲಿ ಸ್ವಿಸ್ ಬ್ಯಾಂಕ್‌ನಲ್ಲಿದ್ದ ಕಪ್ಪು ಹಣವನ್ನು ತರುವುದಾಗಿ ಹೇಳಿದ ಭರವಸೆ ಸುಳ್ಳಾಯಿತು. ಇಂತಹ ಅನೇಕ ಭರವಸೆಗಳು ಸುಳ್ಳಾಗಿವೆ. ಸುಳ್ಳು ಹೇಳುವುದು ಬಿಜೆಪಿಯವರ ಸಾಧನೆ ಎಂದು ಕಿಡಿಕಾರಿದರು. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಅಂಡರ್‌ಪಾಸ್ ಕರೆಂಟ್ ಒಳ್ಳೆಯ ರೀತಿ ಕೆಲಸ ಮಾಡುತ್ತಿದೆ. ನಾವು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ನುಡಿದಂತೆ ನಡೆದ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಹೆಚ್ಚಿನ ಮತಗಳನ್ನು ನೀಡುತ್ತಾರೆಂಬ ಭರವಸೆ ನಮಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಪ್ರೌಢಶಾಲಾ ಶಿಕ್ಷಕರ ಸಂಘದ ಬಿಗಿಪಟ್ಟಿಗೆ SSLC ವಿಶೇಷ ತರಗತಿ ಆದೇಶ ರದ್ದು: ಸಿಎಂ ಸಿದ್ದರಾಮಯ್ಯ!

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಸದಾಶಿವ ಬುಟಾಳಿ, ಚಿದಾನಂದ ಸವದಿ, ಸಿದ್ದಾರ್ಥ ಶಿಂಗೆ, ಅಮೋಘ ಕೊಬ್ಬರಿ, ಸುರೇಶ್ ಮಾಯಣ್ಣನವರ, ಅಸ್ಲಮ್ ನಾಲಬಂದ, ಶ್ರೀಶೈಲ ನಾರಗೊಂಡ, ಸುರೇಶಗೌಡ ಪಾಟೀಲ್, ಎಸ್.ಆರ್.ಗೂಳಪ್ಪನವರ, ರಾವಸಾಬ್‌ ಐಹೊಳೆ, ರಮೇಶ ಶಿಂದಗಿ, ಧರೆಪ್ಪ ಟಕ್ಕಣ್ಣನವರ, ಪ್ರದೀಪ ನಂದಗಾವ, ರೇಖಾ ಪಾಟೀಲ, ಶಿಲ್ಪಾ ತೊದಲವಾಗಿ, ಶಿವಾನಂದ ದಿವಾನಮಳ, ಶಾಮ ಪೂಜಾರಿ, ಗುರಪ್ಪ ದಾಶ್ಯಾಳ, ಸಿಎಸ್ ನೇಮಗೌಡ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios